ರಾಷ್ಟ್ರೀಯ

ಬಿಪಿಎಲ್ ಕಾರ್ಡುದಾರರಿಗೆ ಸಿಹಿಸುದ್ದಿ : ಹೊಸ ಮೆಡಿಕಲ್ ಕಾಲೇಜುಗಳ ಘೋಷಣೆ…

ಬಿಪಿಎಲ್ ಕಾರ್ಡುದಾರರಿಗೆ ಸಿಹಿಸುದ್ದಿ : ಹೊಸ ಮೆಡಿಕಲ್ ಕಾಲೇಜುಗಳ ಘೋಷಣೆ…

ಈ ವರ್ಷದಲ್ಲಿ 24 ಹೊಸ ಮೆಡಿಕಲ್‌ ಕಾಲೇಜುಗಳ ಸ್ಥಾಪನೆ ಮಾಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಮೂರು ಎಂಪಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಕೇಂದ್ರ ಮುಂದಾಗಿದೆ.
ಆರೋಗ್ಯ ಸೇವೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಕೇಂದ್ರ ಬಂಪರ್ ಆಫರ್ ನೀಡಿದೆ, ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದೆ. ಇದರಿಂದ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ 10 ಕೋಟಿ ಕುಟುಂಬದ ಬಡ ಮತ್ತು ಅಶಕ್ತ 50 ಕೋಟಿ ಮಂದಿಗೆ ಲಾಭವಾಗಲಿದೆ. ಇದು ವಿಶ್ವದ ಅತೀ ದೊಡ್ಡ ಸರ್ಕಾರಿ ಫ‌ಂಡಿಂಗ್‌ ಆರೋಗ್ಯ ವಿಮಾ ಯೋಜನೆಯಾಗಿದೆ. ಜತೆಗೆ ಟಿಬಿ ರೋಗಿಗಳ ಚಿಕಿತ್ಸೆಗಾಗಿ, ಪೌಷ್ಟಿಕಾಂಶಕ್ಕಾಗಿ 600ಕೋಟಿ ರೂಪಾಯಿ ಮೀಸಲಿಡಲಾಗಿದೆ.
16730 ಕೋಟಿ ರೂ ವೆಚ್ಚದಲ್ಲಿ ಗ್ರಾಮೀಣ ಶೌಚಾಲಯಗಳ ನಿರ್ಮಾಣ ಮಾಡಲು ನಿರ್ಧರಿಸಿದ್ದು,.ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ.
ಸ್ವಸ್ಥ ಭಾರತ ಸಮೃದ್ಧ ಭಾರತ – ಆಯುಷ್ಮಾನ್‌ ಭಾರತ್‌ ಕಾರ್ಯಕ್ರಮ ನ್ಯೂ ಇಂಡಿಯಾ ದೇಶಾದ್ಯಂತ ಒಂದುವರೆ ಲಕ್ಷ ಆರೋಗ್ಯ ಕೇಂದ್ರ ಸ್ಥಾಪನೆ. ಅರ್ಹರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದೆ.

Click to comment

Leave a Reply

Your email address will not be published. Required fields are marked *

To Top