ರಾಜಕೀಯ

ಮುಂದಿನ ಚುನಾವಣೆಯಲ್ಲಿ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ

ಮುಂದಿನ ಚುನಾವಣೆಯಲ್ಲಿ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ

ಮುಂದಿನ ಚುನಾವಣೆಯಲ್ಲಿ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಜನಾಶೀರ್ವಾದ ಸಮಾವೇಶದಲ್ಲಿ ಹೇಳಿದ್ದಾರೆ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ . ರಾಹುಲ್ ಗಾಂಧಿಯ ರಾಜ್ಯ ಪ್ರವಾಸ ಕಾರ್ಯಕ್ರಮ ನಡೆಯುತ್ತಿದ್ದು ಈ ಸಂದರ್ಭದಲ್ಲಿ

ಜೈಲಿಗೆ ಹೋದವರನ್ನು ಪಕ್ಷದಲ್ಲಿ ಕೂರಿಸಿಕೊಂಡು ಪ್ರಧಾನಿ ಮೋದಿಗೆ ಭ್ರಷ್ಟಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ನಿರೀಕ್ಷೆಗೆತಕ್ಕಂತೆ ನಾವು ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಭರವಸೆಯನ್ನು ರಾಹುಲ್ ನೀಡಿದ್ದಾರೆ. ಮುಂದಿನ ಬಾರಿ ನಮಗೆ ಅವಕಾಶ ನಿಡಿದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತೇವೆ. ರಾಜ್ಯದಲ್ಲಿ ಆರಂಭವಾದ ರಾಹುಲ್ ಪ್ರವಾಸಕ್ಕೆ ಹೆಚ್ಚಿನ ಜನತೆ ಬೆಂಬಲ ಸೂದಿಸಿದ್ದಾರೆ ಎಂದರು.

ಮೋದಿ ಮತ್ತು ಯಡಿಯೂರಪ್ಪಗೆ ತಾಕತ್ ಇದ್ದರೆ ಒಂದೇ ವೇದಿಕೆಯಲ್ಲಿ ಬಂದು ಚರ್ಚಿಸಲಿ, ಹಗರಣ ತೋರಿಸಲಿ, ನಾನು ತೊರಿಸುವೆ, ನಮಗೆ ಮತ ಕೇಳಲು ನೈತಿಕ ಹಕ್ಕಿದೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರಪ್ಪನಾ ಆಣೆಗೂ ಸಿಎಂ ಆಗುವುದಿಲ್ಲ. ರಾಹುಲ್ ಗಾಂಧಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Click to comment

Leave a Reply

Your email address will not be published. Required fields are marked *

To Top