ಸಿನಿಮಾ

‘ಟಗರು’ ಚಿತ್ರದ ಸೆನ್ಸಾರ್ ಸರ್ಟಿಫಿಕೇಟ್ ?

'ಟಗರು' ಚಿತ್ರದ ಸೆನ್ಸಾರ್ ಸರ್ಟಿಫಿಕೇಟ್ ?

ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಟಗರು’ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಚಿತ್ರ ಸೆನ್ಸಾರ್ U/A ಸರ್ಟಿಫಿಕೇಟ್ ನೀಡುವ ಸಾಧ್ಯತೆಗಳು ಇವೆ , ಬಹುತೇಕವಾಗಿ ಫೆ. 23ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗಾಗಲೇ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.
‘ಟಗರು’ ಚಿತ್ರ 2016ರಲ್ಲಿ ಪ್ರಾರಂಭವಾಗಿದ್ದು, ಅಂದಿನಿಂದ ಇಂದಿನವರೆಗೂ ಹಲವು ಕಾರಣಗಳಿಗೆ ಕುತೂಹಲ ಮತ್ತು ನಿರೀಕ್ಷೆಗಳನ್ನು ಹೆಚ್ಚಿಸುತ್ತಲೇ ಇದೆ. ಪ್ರಮುಖವಾಗಿ ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಧನಂಜಯ್ ಮತ್ತು ವಸಿಷ್ಠ ಸಿಂಹ ಇಬ್ಬರೂ ವಿಲನ್ ಆಗಿ ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಮಾನ್ವಿತಾ, ಭಾವನಾ ಮೆನನ್, ದೇವರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಚಿತ್ರವನ್ನು ‘ದುನಿಯಾ’ ಸೂರಿ ನಿರ್ದೇಶಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಚರಣ್‍ರಾಜ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರವನ್ನು ಕೆ.ಪಿ. ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

To Top