ರಾಜಕೀಯ

ಮೋದಿ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಮೋದಿ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಮೋದಿ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಮೋದಿ ಅತೀ ಭ್ರಷ್ಟ ಪ್ರಧಾನಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ಲೂಟಿ ಮಾಡಿ ಜೈಲಿಗೆ ಹೋದವರನ್ನು ಪಕ್ಕದಲ್ಲಿ ಕುರಿಸಿಕೊಂಡು ಮೊದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಆರೋಪಗಳಲ್ಲ ಬೇಸ್ ಲೆಸ್ ಆಗಿದೆ. ನಾನಾಗಿದ್ರೆ ನೀರವ್ ಮೋದಿಯನ್ನು ದೇಶ ಬಿಟ್ಟು ಹೋಗಲು ಖಂಡಿತ ಬಿಡುತ್ತಿರಲಿಲ್ಲ, ಇವರ ಸರ್ಕಾರ ಇರುವಾಗಲೇ ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ 11 ಸಾವಿರ ಕೋಟಿ ಟೋಪಿ ಹಾಕಿ ಹೊಗಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರಿಗೆ ದೇಶದ, ರಾಜ್ಯದ ಸಮಸ್ಯೆಗಳು ಕಾಣಿಸುತ್ತಿಲ್ಲ. ಸಾಲ ಮನ್ನಾ, ರೈತರ ಸಮಸ್ಯೆ, ವಿವಿಧ ಸಮಸ್ಯೆಗಳ ಬಗ್ಗೆ ಮಾತನಾಡದೇ ಕೇವಲ ಕಮಿಷನ್ ವಿಚಾರ ಮಾತ್ರ ಪ್ರಸ್ತಾಪ ಮಾಡಿದ್ದಾರೆ. ಅವರದ್ದೇ ಸರ್ಕಾರ ಇದೆ. ಕಮಿಷನ್ ಬಗ್ಗೆ ಮಾಹಿತಿ ಇದ್ದರೆ ನೀಡಲಿ ಎಂದು ಹೇಳಿದರು.

To Top