ವ್ಯಾಪಾರ

ಬ್ಯಾಂಕ್ ಗ್ರಾಹಕರಿಗೆ ಗಮನಿಕ

ಇದೇ ತಿಂಗಳಾಂತ್ಯಕ್ಕೆ 10 ಲಕ್ಷ ಬ್ಯಾಂಕ್ ನೌಕರರು 2 ದಿನ ಮುಷ್ಕರ ಕೈಗೊಂಡಿದ್ದು, ತಮ್ಮ ಬ್ಯಾಂಕ್ ವ್ಯವಹಾರಗಳನ್ನು ಮೊದಲೇ ಮುಗಿಸಿಕೊಳ್ಳಲು ಪ್ಲಾನ್ ಮಾಡಿಕೊಳ್ಳಿ. ವೇತನ ಏರಿಕೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮೇ ತಿಂಗಳ ಅಂತ್ಯಕ್ಕೆ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿರುವುದಾಗಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ತಿಳಿಸಿದ್ದಾರೆ. ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಶೇ. 2 ರಷ್ಟು ವೇತನ ಏರಿಕೆ ಪ್ರಸ್ತಾಪಿಸಿದ್ದು, ಇದನ್ನು ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ತಿರಸ್ಕರಿಸಿದೆ. ಕಾರ್ಪೊರೇಟ್ ಉದ್ಯಮಿಗಳ ಸಾವಿರಾರು ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆದರೆ, ನೌಕರರ ವೇತನ ಏರಿಕೆ ಮಾಡಲು ನಿರಾಕರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕೇಂದ್ರ ಹಣಕಾಸು ಸಚಿವಾಲಯ ಕೂಡಲೇ ಮಧ್ಯಪ್ರವೇಶಿಸಿ, ವೇತನ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ 2 ದಿನ ಮುಷ್ಕರ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

To Top